ಮುಸ್ಲಿಂ ಸಮುದಾಯ ಬಕ್ರೀದ್ ಆಚರಣೆಯಲ್ಲಿ ಎನ್ ಮಾಡ್ಬೇಕು? ಎನ್ ಮಾಡ್ಬಾರ್ದು?  ಈ ರೂಲ್ಸ್ ಫಾಲೋ ಮಾಡಿದ್ರೆ ಮಾತ್ರ ಬಕ್ರೀದ್ ಆಚರಣೆ.

ಮುಸ್ಲಿಂ ಸಮುದಾಯ ಬಕ್ರೀದ್ ಆಚರಣೆಯಲ್ಲಿ ಎನ್ ಮಾಡ್ಬೇಕು? ಎನ್ ಮಾಡ್ಬಾರ್ದು? ಈ ರೂಲ್ಸ್ ಫಾಲೋ ಮಾಡಿದ್ರೆ ಮಾತ್ರ ಬಕ್ರೀದ್ ಆಚರಣೆ.

ಬಕ್ರೀದ್ ತ್ಯಾಗ ಬಲಿದಾನದ ಸಂಕೇತ. ಭಾರತವೂ ಸೇರಿದಂತೆ ವಿಶ್ವದ್ಯಾಂತ ಮುಸ್ಲಿಮರು ಈ ಹಬ್ಬವನ್ನು ಭಕ್ತಿ ಶ್ರದ್ಧೆಯಿಂದ ಆಚರಿಸುತ್ತಾರೆ. ಪ್ರವಾದಿಗಳಲ್ಲೊಬ್ಬರಾದ ಪ್ರವಾದಿ ಇಬ್ರಾಹಿಮರು ತಮ್ಮ ಮಗನಾದ ಇಸ್ಮಾಯಿಲ್‌ರನ್ನು ಸೃಷ್ಟಿಕರ್ತ ಅಲ್ಲಾಹನಿಗೆ ಬಲಿ ಕೊಡಲು ಮುಂದಾದ ದಿನವನ್ನು ಈದ್-ಉಲ್-ಅದಾ ಅರ್ಥಾತ್ ಬಕ್ರೀದ್ ಎನ್ನಲಾಗುತ್ತದೆ. ಈ ಹಬ್ಬದ ಹಿನ್ನೆಲೆ, ಮಹತ್ವ ಹೀಗಿದೆ. ಬಕ್ರೀದ್ ಸಂದರ್ಭದಲ್ಲಿ ಶಕ್ತ ಮುಸ್ಲಿಮರು, ಇಸ್ಲಾಂ ಧರ್ಮದ ಐದು ಪ್ರಮುಖ ಕರ್ತವ್ಯಗಳಲ್ಲೊಂದಾದ ಪವಿತ್ರ ಹಜ್ಜ್ ಯಾತ್ರೆಗೆ ತೆರಳುತ್ತಾರೆ. ಪ್ರವಾದಿ ಮಹಮ್ಮದರ ಕರ್ಮಭೂಮಿಯಾಗಿದ್ದ ಸೌದಿ ಅರೆಬಿಯಾದ ಮೆಕ್ಕಾ ಮತ್ತು ಮದೀನ ಪಟ್ಟಣಗಳಲ್ಲಿರುವ ಪವಿತ್ರ ಯಾತ್ರಾ ಸ್ಥಳಗಳ ದರ್ಶನ ಪಡೆದು ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಿ ಬರುತ್ತಾರೆ. ಈ ಪೈಕಿ ಪವಿತ್ರ ಯಾತ್ರಾ ಸ್ಥಳವಾದ ಕಾಬಾದ ದರ್ಶನ ಹಾಗೂ ಕೆಟ್ಟಗುಣಗಳ ಸಂಕೇತವಾದ ಸೈತಾನನಿಗೆ ಸಾಂಕೇತಿಕವಾಗಿ ಕಲ್ಲು ಹೊಡೆಯುವ ಸಂಪ್ರದಾಯ ಅತ್ಯಂತ ಪ್ರಮುಖವಾದದ್ದು.

ವಿಶ್ವದ ಮೂಲೆಮೂಲೆಗಳಿಂದ ಬಂದು ಹಜ್ಜ್ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳು ಬಕ್ರೀದ್ ಹಬ್ಬದ ದಿನದಂದು ತಮ್ಮ ಯಾತ್ರೆಯನ್ನು ಪೂರೈಸಿ ತಮ್ಮ ತಮ್ಮ ತಾಯಿನಾಡಿಗೆ ಮರಳುತ್ತಾರೆ. ಒಟ್ಟಾರೆ, ಹಜ್ಜ್ ಯಾತ್ರೆ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ನಡೆಯುವ ಕ್ರಿಯೆ. ಬಕ್ರೀದ್ ಹಬ್ಬದಲ್ಲಿ ಮುಸ್ಲಿಮರು ಕುರಿ, ಒ೦ಟೆಗಳನ್ನು ಹೆಚ್ಚು ಹೆಚ್ಚಾಗಿ ಬಲಿ ಕೊಡುತ್ತಾರೆ. ಇದನ್ನು “ಖುರ್ಬಾನಿ” ಎಂದು ಕರೆಯುತ್ತಾರೆ. ಈ ರೀತಿ ಬಲಿ ಕೊಟ್ಟ ಪ್ರಾಣಿಯ ಮಾ೦ಸವನ್ನು ಮೂರು ಭಾಗಗಳಾಗಿ ವಿ೦ಗಡಿಸಿ ಒಂದು ಭಾಗವನ್ನು ನೆ೦ಟರಿಗೆ ಕೊಡುತ್ತಾರೆ. ಎರಡನೆಯ ಭಾಗವನ್ನು ಬಡವರಿಗೆ ಹ೦ಚುತ್ತಾರೆ. ಉಳಿದ ಮೂರನೆಯ ಭಾಗವನ್ನು ಮನೆಯವರಿಗಾಗಿ ಉಳಿಸಿಕೊಳ್ಳುತ್ತಾರೆ. ಇಬ್ರಾಹಿಮ್‌ರವರ ಆ ದೈವಾಜ್ಞೆ ಪಾಲನೆಯ ನೆನಪನ್ನು ಬಲಿದಾನದ ಮೂಲಕ ಆಚರಿಸುತ್ತಾರೆ ಎನ್ನಬಹುದು.

ಜುಲೈ 10 ನೇ ತಾರೀಕು ಬಕ್ರೀದ್ ಹಬ್ಬ ಆಚರಣೆ ಮಾಡುವುದಕ್ಕೆ ಮುಸ್ಲಿಂ ಸಮುದಾಯ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಲವು ಮಾರ್ಗಸೂಚಿಯನ್ನು ಹೊರಡಿಸಿದೆ. ಹಬ್ಬದ ದಿನ ರಸ್ತೆಯಲ್ಲಿ ಪ್ರಾರ್ಥನೆ ಮಾಡುವಂತಿಲ್ಲ. ಪ್ರಾರ್ಥನೆ ವೇಳೆ ಎಲ್ಲರೂ ಕೂವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಅಂತ ತಿಳಿಸಿದೆ. ಬಕ್ರೀದ್ ಹಣವನ್ನು ಶಾಂತಿ ಸುವ್ಯವಸ್ಥೆ ಇಂದ ಸಾಮರಸ್ಯದಿಂದ ಆಚರಣೆ ಮಾಡಬೇಕು. ಕರ್ನಾಟಕ ಜಾನುವಾರು ಹತ್ಯೆ ಬಂದಕ ಮತ್ತು ಸಾರ್ವತ್ರಿಕ ಅಧಿನಿಯಮ ಉಲ್ಲಂಘನೆ ಆಗದ ಹಾಗೆ ಕೂರ್ಬಾನಿ ಅಂದ್ರೆ ಪ್ರಾರ್ಥನೆಯನ್ನು ನೆರವೇರಿಸಬೇಕು ಅಂತ ಸರ್ಕಾರ ತಿಳಿಸಿದೆ. ಕುರ್ಬಾನಿ ಯನ್ನೂ ಸಾರ್ವಜನಿಕ ಪ್ರದೇಶ, ರಸ್ತೆಗಳು, ಶಾಲಾ, ಕಾಲೇಜು, ಆಸ್ಪತ್ರೆ ಆವರಣ ಉದ್ಯಾನವನ ಹಾಗೂ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿಸಲಾಗಿದೆ. ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಸಂದರ್ಭದಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು. ಪ್ರಾಣಿ ತ್ಯಾಜ್ಯವನ್ನು ಪರಿಣಾಮಕಾರಿಯಾಗಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಸೂಕ್ತ ರೀತಿಯಲ್ಲಿ ವಿಲೇ ವಾರಿ ಮಾಡಬೇಕು. ಪೊಲೀಸರು, ಮಾಲಿನ್ಯ ನಿಯಂತ್ರಣ ಮಂಡಳಿ ನೀಡುವ ನಿರ್ದೇಶನವನ್ನು ಕಡ್ಡಾಯವಾಗಿ ಪಾಲಿಸಬೇಕು ಅಂತ ಸೂಚಿಸಲಾಗಿದೆ.

ಸುದ್ದಿ